TSK

TSK · ಯೆಶಾಯ 63:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.

ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.

ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.

ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

¶ ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.