TSK

TSK · ಯೆಶಾಯ 64:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.

ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.

ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.

ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.

ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.

‹ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.›

¶ ತರುವಾಯ ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.