TSK

TSK · ಯೆಶಾಯ 65:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ

ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.

ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.

ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.

‹ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.›

ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.