TSK

TSK · ಯೆಶಾಯ 65:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.

ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.

¶ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.

ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.

ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.

ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.

ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.

ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”

¶ ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.

ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.