TSK

TSK · ಯೆಶಾಯ 65:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.

ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.

ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”

ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.

¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.

ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.

‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.›

ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.