ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
TSK
TSK · ಯೆಶಾಯ 7:11
Treasury of Scripture Knowledge references in ಕನ್ನಡ IRV.
¶ ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.
¶ ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,
¶ ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,