ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.
TSK
TSK · ಯೆಶಾಯ 7:18
Treasury of Scripture Knowledge references in ಕನ್ನಡ IRV.
ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.
ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.
ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.
ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.