TSK

TSK · ಯೆಶಾಯ 7:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು, ಹೊಡೆದು, ದಮಸ್ಕ ಪಟ್ಟಣದ ಉತ್ತರಕಡೆಯಲ್ಲಿರುವ ಹೋಬಾ ಊರಿನ ತನಕ ಅವರನ್ನು ಹಿಂದಟ್ಟಿದ್ದನು.

¶ ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.

ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.

¶ ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.

ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದಾಗ ಯೆಹೋವನು ಹೋಶೇಯನಿಗೆ, “ಈ ಮಗುವಿಗೆ ‘ಲೋ ರುಹಾಮ’ ಎಂಬ ಹೆಸರಿಡು; ಏಕೆಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವುದಿಲ್ಲ, ಅವರನ್ನು ಕ್ಷಮಿಸುವುದಿಲ್ಲ.