TSK

TSK · ಯೆಶಾಯ 7:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.

¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!

ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.

ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.