TSK

TSK · ಯೆಶಾಯ 8:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,

ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.

ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.

¶ ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?

ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.

ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ