TSK

TSK · ಯೆಶಾಯ 8:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.

ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.

¶ ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.

ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.

¶ “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.

¶ ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.

ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.

ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.