TSK

TSK · ಯೆಶಾಯ 9:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.

ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.

ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.

ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.

ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.

¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.