ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
TSK
TSK · ಯೆಶಾಯ 9:17
Treasury of Scripture Knowledge references in ಕನ್ನಡ IRV.
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.
ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›