¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
TSK
TSK · ಯೆಶಾಯ 9:18
Treasury of Scripture Knowledge references in ಕನ್ನಡ IRV.
ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.
ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
¶ ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›
‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.