TSK

TSK · ಯೆಶಾಯ 9:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.

ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.

ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.

‹ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.›

ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

¶ ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.