“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.
TSK
TSK · ಯೆಶಾಯ 9:3
Treasury of Scripture Knowledge references in ಕನ್ನಡ IRV.
ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.
ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.
¶ ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
ಯೆಹೋವನು ಆಳುತ್ತಿದ್ದ ದುಷ್ಟರ ಕೋಲನ್ನೂ, ಅರಸರ ದಂಡವನ್ನೂ ಮುರಿದುಬಿಟ್ಟನು.
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!
ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
¶ ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.
ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.