TSK

TSK · ಯಾಕೋಬನು 1:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.

ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.

ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›

ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.

ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.