¶ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
TSK
TSK · ಯಾಕೋಬನು 1:9
Treasury of Scripture Knowledge references in ಕನ್ನಡ IRV.
ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
ಅವರಿಗೆ, ‹“ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು”› ಎಂದು ಹೇಳಿದನು.
ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.
ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
‹ನಾನು ನಿನ್ನ ಸಂಕಟವನ್ನೂ›‹ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ›‹ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ›‹ಸಭಾಮಂದಿರದವರಾಗಿದ್ದಾರೆ.›
¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.