¶ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
TSK
TSK · ಯಾಕೋಬನು 2:13
Treasury of Scripture Knowledge references in ಕನ್ನಡ IRV.
ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,
ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
‹ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.›
‹ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.›
¶ ‹“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.›
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.