TSK

TSK · ಯಾಕೋಬನು 2:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.

¶ ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.

ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.