TSK

TSK · ಯಾಕೋಬನು 3:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.

ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.

ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.

ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.

ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.

ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.

ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?

ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

‹ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.›

‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›

ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

¶ ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,

¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.

ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

¶ ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.

¶ ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.

ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.