¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
TSK
TSK · ಯಾಕೋಬನು 4:5
Treasury of Scripture Knowledge references in ಕನ್ನಡ IRV.
ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
¶ ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.