TSK

TSK · ಯಾಕೋಬನು 5:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.

ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.

¶ ‹“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.›

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›

‹ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!›

ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

¶ ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.