TSK

TSK · ಯೆರೆಮಿಯ 13:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ

ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.

ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.

ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.

¶ ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.

ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.

ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.

ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”

ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”

ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.

‹ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.›