ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
TSK
TSK · ಯೆರೆಮಿಯ 13:19
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.
¶ ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
¶ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.
ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.