TSK

TSK · ಯೆರೆಮಿಯ 13:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ.

‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?

ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.

ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.

ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.

ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,

ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.

ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”

ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”

ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?

ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.