ಯೆಶಾಯ 47:3
TSK
ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
TSK
Treasury of Scripture Knowledge references in ಕನ್ನಡ IRV.
ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.
ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.
ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.