ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
TSK
TSK · ಯೆರೆಮಿಯ 17:13
Treasury of Scripture Knowledge references in ಕನ್ನಡ IRV.
ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.
ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.
ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.
ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.
ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›
ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.
¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.