TSK

TSK · ಯೆರೆಮಿಯ 2:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ದಾವೀದನು ಅವನಿಗೆ, “ನೀನು ಈ ಹೊತ್ತು ಇಲ್ಲೇ ಇರು. ನಾಳೆ ನಿನ್ನನ್ನು ಕಳುಹಿಸುತ್ತೇನೆ” ಎಂದು ಆಜ್ಞಾಪಿಸಿದನು. ಊರೀಯನು ಆ ದಿನ ಯೆರೂಸಲೇಮಿನಲ್ಲೇ ಇದ್ದನು.

ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.

ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.

ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.

¶ ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”