ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?
TSK
TSK · ಯೆರೆಮಿಯ 2:28
Treasury of Scripture Knowledge references in ಕನ್ನಡ IRV.
¶ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.
ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.
ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.