TSK

TSK · ಯೆರೆಮಿಯ 21:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.

ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.

ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.

¶ ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.