TSK

TSK · ಯೆರೆಮಿಯ 21:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.

ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.

ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.

ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೇಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಯಾಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ. ದೇವರು ನನ್ನನ್ನು ಬಿಟ್ಟು ದೂರ ಹೋಗಿದ್ದಾನೆ. ಆತನು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲನು. ಆದುದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವಿಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು” ಅಂದನು.

ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.

¶ ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?

“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.

¶ ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.

ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,

ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.

ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.

¶ ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.

¶ ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”

ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.

¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,

¶ ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.