TSK

TSK · ಯೆರೆಮಿಯ 22:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.

‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.

¶ “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.

¶ ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,

ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.

¶ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,