TSK

TSK · ಯೆರೆಮಿಯ 26:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.

ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

‹ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.›

‹ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.›