ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.
TSK
TSK · ಯೆರೆಮಿಯ 37:13
Treasury of Scripture Knowledge references in ಕನ್ನಡ IRV.
ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
¶ ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.
ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
¶ ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
¶ “ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’
ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.