TSK

TSK · ಯೆರೆಮಿಯ 39:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

¶ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.

¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,

“ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.