TSK

TSK · ಯೆರೆಮಿಯ 39:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.

ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.

“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”

ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

¶ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.

ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.

ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.

ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.

ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.