TSK

TSK · ಯೆರೆಮಿಯ 39:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.

ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.

ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,

“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.

ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.

¶ ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.

¶ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.

ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.