TSK

TSK · ಯೆರೆಮಿಯ 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.

ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,

ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.

¶ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.