TSK

TSK · ಯೆರೆಮಿಯ 41:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.

ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.

ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

¶ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.

ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.