ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
TSK
TSK · ಯೆರೆಮಿಯ 43:10
Treasury of Scripture Knowledge references in ಕನ್ನಡ IRV.
ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.