TSK

TSK · ಯೆರೆಮಿಯ 43:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.

¶ ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”

ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.