¶ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
TSK
TSK · ಯೆರೆಮಿಯ 44:4
Treasury of Scripture Knowledge references in ಕನ್ನಡ IRV.
ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.
ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?
¶ “ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.
¶ ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
¶ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.