All books in ಕನ್ನಡ IRV

ಯೆರೆಮಿಯ 45

ಕನ್ನಡ IRV · chapter 45

52 ಅಧ್ಯಾಯಗಳು

ಕನ್ನಡ IRV / ಯೆರೆಮಿಯ / ಅಧ್ಯಾಯ 45

ಕನ್ನಡ IRV · chapter 45

1 ¶ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.

2 “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?

3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,

4 ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.

5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”