TSK

TSK · ಯೆರೆಮಿಯ 49:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.

ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.

ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.

ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.

ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”

“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.

¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.