TSK

TSK · ಯೆರೆಮಿಯ 7:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;

ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.

¶ ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,

¶ ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,

ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.

¶ ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.

ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.

ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,

ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›

ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಜಯಹೊಂದುವವನಿಗೆ›‹ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.›

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›