ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
TSK
TSK · ಯೆರೆಮಿಯ 8:21
Treasury of Scripture Knowledge references in ಕನ್ನಡ IRV.
ನೆಹೆಮಿಯ 2:3
TSK
ಪರಮ ಗೀತ 1:5
TSK
ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
ಯೆರೆಮಿಯ 9:1
TSK
ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!
ಯೆರೆಮಿಯ 17:16
TSK
ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
ಯೋವೇಲ 2:6
TSK
ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.
ಲೂಕನು 19:41
TSK
¶ ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,