TSK

TSK · ಯೋಬನು 11:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.

(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.

ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

‹ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.›