TSK

TSK · ಯೋಬನು 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.

ಇಗೋ, ಇದನ್ನು ವಿಚಾರಿಸಿದ್ದೇವೆ, ಯಥಾರ್ಥವಾಗಿಯೇ ಇದೆ; ಇದನ್ನು ಕೇಳು, ನಿನ್ನಷ್ಟಕ್ಕೆ ನೀನೇ ತಿಳಿದುಕೋ.”

ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?

‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.