TSK

TSK · ಯೋಬನು 13:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

¶ ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.

ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.

ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.

ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.